ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಜಖಂಗೊಂಡಿರುವ ಘಟನೆ ನಡೆದಿದೆ.
ಧರ್ಮಸ್ಥಳದಿಂದ – ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ರಸ್ತೆಯಿಂದ ಹೊಳೆಗೆ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬಸ್ ನ ಟಯರ್ ಸ್ಪೋಟಗೊಂಡಿದ್ದೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.