ಕರಾವಳಿಯಲ್ಲಿ ಮಳೆರಾಯನ ಸಿಂಚನ

ಸಮಗ್ರ ನ್ಯೂಸ್: ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಂದು ಮಳೆಯ ಸಿಂಚನವಾಗಿದೆ. ಕರಾವಳಿಯ ಬಹುತೇಕ ಕಡೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget ... ..

ಜಿಲ್ಲೆಯ, ಸುಳ್ಯ, ಕಡಬ, ಪುತ್ತೂರು ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆ ಮಳೆ ಸುರಿದಿದ್ದು, ಇಳೆ ತಂಪಾಗಿದೆ. ಕೃಷಿ ಭೂಮಿ ತಂಪಾಗಿದ್ದು, ಕೃಷಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Ad Widget

ರಾಜ್ಯಾಧ್ಯಂತ ಮಳೆ ಸಂಭವ: ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 20-21 ರ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂಊರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *