ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ| ಇಬ್ಬರು ಸಜೀವ ದಹನ

Ad Widget ... ..

ಸಮಗ್ರ ನ್ಯೂಸ್: ಸಮೀಪದ ಫಕೀರ್ನಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ನಡೆದಿದೆ. ರಜಾಕ್ ಮಲ್ಲಾರ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

Ad Widget

ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಕಾಪು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

Leave a Comment

Your email address will not be published. Required fields are marked *