ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಬಂಧಿತ ಆರೋಪಿ ‘ಸಮಾಜ ಸೇವೆ’ ಹೆಸರಿನಲ್ಲಿ ಹೀನ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದ್ದು, ಈತನಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದೆ.
ಬಂಧಿತ ಆರೋಪಿಯನ್ನು ಅಬ್ದುಲ್ ರಾಝೀಕ್ ಎಂದು ಗುರುತಿಸಲಾಗಿದೆ. ನಗರದ ನಂದಿಗುಡ್ಡೆ ಎಂಬಲ್ಲಿ ಫ್ಲ್ಯಾಟ್ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಇವನನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ಈಗಾಗಲೇ 10 ಪೋಕ್ಸೋ ಪ್ರಕರಣ ದಾಖಲಿಸಿ 15ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈಗ ಬಂಧಿತನಾಗಿರುವ ಆರೋಪಿ ಸಮಾಜ ಸೇವೆಯ ಹೆಸರಿನಲ್ಲಿ ದ.ಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದು, ರಾಝೀಕ್ ಎನ್ ಜಿ ಒ ದಲ್ಲಿ ತೊಡಗಿ,ಸಮಾಜ ಸೇವೆಯಲ್ಲಿ ತೊಡಗಿಸಿರೋದಾಗಿ ಹೇಳಿದ್ದ, ಅಲ್ಲದೆ ವಿಐಪಿ ಗಳ ಅಧಿಕಾರಿಗಳ ಜೊತೆ ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ. ಕಮೀಷನರ್ ಕಛೇರಿಗೂ ಭೇಟಿ ನೀಡಿ ನನ್ನ ಜೊತೆಯೂ ಫೋಟೋ ತೆಗೆಸಿಕೊಂಡಿದ್ದ. ತನಿಖೆಯ ವೇಳೆ ರಾಝೀಕ್ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರೋದು ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆಯಾಗುತ್ತಿದ್ದಂತೆಯೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಈತ ಮಂಗಳೂರಿಗೆ ವಾಪಾಸಾಗುತ್ತಿದ್ದಂತೆಯೇ ಬಂಧಿತಸಲಾಗಿದೆ. ಬಾಲಕಿಯ ಅತ್ಯಾಚಾರ ಮಾಡಿದ್ದಕ್ಕೆ ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕಿವೆ. ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ತನಿಖೆಯನ್ನು ಮುಂದುವರಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.