ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹೃದಯಾಘಾತ; ಮಹಿಳೆ ಸಾವು

Ad Widget ... ..

ಸಮಗ್ರ ನ್ಯೂಸ್: ಜಿಮ್‍ನಲ್ಲಿ ವರ್ಕೌಟ್ ಮಾಡುವಾಗ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಮಲ್ಲೇಶಪಾಳ್ಯದಲ್ಲಿ ನಡೆದಿದೆ. ಮೃತಳನ್ನು ವಿನಯಕುಮಾರಿ(44) ಎಂದು ಗುರುತಿಸಲಾಗಿದೆ.

Ad Widget

ಇವರು ಪ್ರತಿದಿನದಂತೆ ಶನಿವಾರವೂ ಮಲ್ಲೇಶಪಾಳ್ಯದಲ್ಲಿರುವ ಜಿಮ್ ಸೆಂಟರ್‍ಗೆ ತೆರಳಿದ್ದಾರೆ. ಈ ವೇಳೆ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಪಟ್ಟರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ವಿನಯಕುಮಾರಿ ಮೂಲತಃ ಮಂಗಳೂರು ನಿವಾಸಿಯಾಗಿದ್ದು, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *