ಸಮಗ್ರ ನ್ಯೂಸ್: ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳಕ್ಕೆ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.
2022-23ರ ಸಾಲಿನಲ್ಲಿ ಪ್ರತಿ ಯೂನಿಟ್‌ಗೆ 35 ರಿಂದ 45 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೇ ಅಂತ ಬೆಸ್ಕಾಂ ತಾಂತ್ರಿಕ ವಿಭಾಗದ ನಿರ್ದೇಶಕ ನಾಗಾರ್ಜುನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ಕೆಇಆರ್‌ಸಿ ದರ ಪರಿಷ್ಕರಣೆ ಮಾಡುತ್ತದೆ. ಈ ನಡುವೆ ದರ ಏರಿಕೆ ಬಗ್ಗೆ ಅಭಿಪ್ರಾಯ ಪಡೆದುಕೊಂಡಿದೆ. ವಿದ್ಯುತ್ ಬೆಲೆ ಪರಿಷ್ಕರಣೆ ನಡೆಸಿರುವ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಮಂಡಳಿ ವಿಧಾನಸಭೆ ಅಧಿವೇಶನ ಮುಗಿದ ಬಳಿಕ ಹೊಸ ದರಗಳನ್ನು ಪ್ರಕಟ ಮಾಡಲಿದೆ ಎನ್ನಲಾಗಿದ್ದು, ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆ ಕಹಿ ಸಿಗುವುದು ಖಚಿತವಾಗಿದೆ.