ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವಿಚಾರವನ್ನು ಅವರ ಪುತ್ರ ಮಾಜಿ ಸಚಿವ ಹೆಚ್ ಡಿ ರೇವಣ್ಣ ಕೂಡ ದೃಢಪಡಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ರೇವಣ್ಣ, ಐಟಿ ಅಧಿಕಾರಿಗಳು ನನ್ನ ತಾಯಿಗೆ ನೋಟಿಸ್ ನೀಡಿದ್ದಾರೆ. ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ನೋಟಿಸ್ ಕೊಟ್ಟಿದ್ದಾರೆ. ಆದಕ್ಕೆ ಉತ್ತರ ಕೊಡೋದು ಗೊತ್ತಿದೆ. ನನಗೆ ಕೊಟ್ಟಿದ್ದರೆ ಬೇಜಾರು ಇರಲಿಲ್ಲ ಎಂದು ಕಿಡಿಕಾರಿದ್ದಾರೆ