ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ.ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ.
ಕಲ್ಲಡ್ಕದ ಭಯೋತ್ಪಾದಕ ಒಬ್ರು ಹೇಳಿದ ಹಾಗೆ ವರ್ಗಾವಣೆ ನಡೆಯುತ್ತಿರುವುದು ದುರಂತ ಎಂದು ಆರ್ ಎಸ್ ಎಸ್ ನ ಕಲ್ಲಡ್ಕ ಪ್ರಭಾಕರ್ ಭಟ್ಟರ ಹೆಸರು ಹೇಳದೆ ಬಿಜೆಪಿ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಕಲಾಪದಲ್ಲಿ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರುವ ಕುರಿತ ವಿಷಯದಲ್ಲಿ ನಿಯಮ 68ರ ಮೇಲಿನ ಚರ್ಚೆಯಲ್ಲಿ ಮಾತ್ನಾಡಿದ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಪೊಲೀಸ್ ಇಲಾಖೆಗಳ ಲಂಚ, ಭ್ರಷ್ಟಾಚಾರದ ಬಗ್ಗೆ ಧಾರವಾಹಿಗಳನ್ನ ಪ್ರಕಟಿಸುತ್ತಿದ್ದಾರೆ. ನೇಮಕಾತಿ, ವರ್ಗಾವಣೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ನ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರ ವರ್ಗಾವಣೆ ನಡೆಸುತ್ತಿದೆ. ಹಣ ಕೊಟ್ಟು ವರ್ಗಾವಣೆ ಆದ ಅಧಿಕಾರಿಗಳು ಪೊಲೀಸ್ ಠಾಣೆಗಳಲ್ಲಿ ಲಂಚ ತೆಗೆದುಕೊಳ್ಳದೆ ಕೆಲಸಗಳನ್ನೇ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.
ನೇಮಕಾತಿಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಪಿಎಸ್ ಐ ಅಭ್ಯರ್ಥಿಗಳು ನೊಂದು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಪತ್ರಿಕೆಯಲ್ಲಿ ಅದರ ಬಗ್ಗೆ ಸುದೀರ್ಘವಾಗಿ ದಾಖಲೆ ಸಮೇತ ಪ್ರಕಟ ಮಾಡಿದೆ. ಅಭ್ಯರ್ಥಿಗಳು ಉತ್ತರ ಪತ್ರಿಕೆ ಕೊಡಿ ಎಂದು ಅರ್ಜಿ ಸಲ್ಲಿಸಿ ಎಂದು ಗೃಹ ಸಚಿವರು ಹೇಳಿಕೆ ಕೊಡ್ತಾರೆ, ಆದ್ರೆ ಪೊಲೀಸ್ ಮಹಾ ನಿರ್ದೇಶಕರು ಉತ್ತರ ಪತ್ರಿಕೆ ಕೊಡಕ್ ಆಗಲ್ಲ ಅಂತಾರೆ. ಅಭ್ಯರ್ಥಿಗಳನ್ನ ಯಾಕೆ ಪೊಲೀಸ್ ಇಲಾಖೆ ದಿಕ್ಕು ತಪ್ಪಿಸುತ್ತಿದೆ ಎಂದು ಅವರು ಪ್ರಶ್ನಿಸಿದರು.