ಗುಂಡ್ಯ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ ಪ್ರಕರಣ| ಹಲ್ಲೆಗೈದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಹಲ್ಲೆ ನಡೆಸಿದ್ದಾರೆಂಬ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರದಂದು ಗುಂಡ್ಯದಿಂದ‌ ವರದಿಯಾಗಿದೆ.

Ad Widget ... ..

ಪುತ್ತೂರು ಸಂಪ್ಯ ನಿವಾಸಿ ನಝೀರ್(21) ಎಂಬಾತ ಪೂಜಾ ಎಂಬಾಕೆಯನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್ ಹಾಗೂ ಇತರರು ಆಟೋರಿಕ್ಷಾವನ್ನು ತಡೆದು ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಉಪ್ಪಿನಂಗಡಿ ಪೊಲೀಸರು ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಅನಿಲ ನಿವಾಸಿ ಬಾಲಚಂದ್ರ(35) ಹಾಗೂ ದೇರಣೆ ನಿವಾಸಿ ರಂಜಿತ್(31) ಎಂಬವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *