ಸಮಗ್ರ ನ್ಯೂಸ್: ಹೈಕೋರ್ಟ್ ಆದೇಶ, ಸರ್ಕಾರದ ನಿಯಮ ಮೀರಿ ಧ್ವನಿವರ್ಧಕ ಬಳಕೆಯನ್ನು ತಡೆಯಲು ಮಂಗಳೂರು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 1001 ಸ್ಥಳಗಳಿಗೆ ಪೊಲೀಸರು ನೋಟಿಸ್ ನೀಡಿದ್ದು, ಸರ್ಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.
ಮಂಗಳೂರು ನಗರದ 357 ದೇವಸ್ಥಾನ, 168 ಚರ್ಚ್, 95 ಚರ್ಚ್, 106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳಗಳು ಹಾಗೂ 98 ಮನರಂಜನಾ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.
ಧ್ವನಿವರ್ಧಕಗಳ ಶಬ್ದ ಹೈಕೋರ್ಟ್ ತಿಳಿಸಿದ ಡೆಸಿಬಲ್ಗಿಂತ ಮೀರಬಾರದು ಎಂಬ ನಿಯಮವಿದ್ದು ಅದನ್ನು ಪಾಲಿಸಬೇಕು. ಒಂದು ವೇಳೆ ನಿಯಮ ಉಲಂಘಿಸಿದರೆ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.