ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 11 ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಏಪ್ರಿಲ್ 10ರವರೆಗೂ ಮಳೆಯಾಗಲಿದೆ. ಇಂದು ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಎ.7ರಂದು ಸಂಜೆ ಸುರಿದ ಗುಡುಗು ಸಹಿತ ಭಾರೀ ಮಳೆಗೆ ಸಿಡಿಲು ಬಡಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹಾವೇರಿಯ ಶಿಗ್ಗಾಂವಿಯಲ್ಲಿ ಸಂಭವಿಸಿದೆ. ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿದ್ದು, ಹಲವೆಡೆ ಕೃಷಿ, ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ.