ಪ್ರಚೋದನಕಾರಿ ಹೇಳಿಕೆ; ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Ad Widget ... ..

ಕೆಲ ದಿನಗಳ ಹಿಂದೆ ನಗರದಲ್ಲಿ ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ಅವರ ವಿರುದ್ಧ ದೂರು ದಾಖಲಿಸುವಂತೆ ಕೋರ್ಟ್ ಮೊರೆ ಹೋಗಲಾಗಿತ್ತು.

Ad Widget

ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಿದ ಹಿನ್ನಲೆಯಲ್ಲಿ, ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Leave a Comment

Your email address will not be published. Required fields are marked *