ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ಮೈಸೂರು, ಹಾಸನದಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶನಿವಾರ ಸಂಜೆ ಕರಾವಳಿ, ಮಲೆನಾಡು, ಘಟ್ಟಪ್ರದೇಶ ಸೇರಿದಂತೆ ಉತ್ತರ ಕರ್ನಾಟಕದಲ್ಲೂ ಭಾರೀ ಮಳೆಯಾಗಿದೆ.
ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಸಾಕಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ. 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದು ಮಳೆ ಮುಂದುವರೆಯಲಿದೆ. ತಮಿಳುನಾಡು, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇಂದು ಮಳೆಯಾಗಲಿದೆ. ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ.