Ad Widget .

ಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ನಾಮಕರಣ

Ad Widget . Ad Widget .

ಶ್ರೀ ನಾರಾಯಣ ಗುರುಗಳ ವಿಚಾರಧಾರೆಯೊಂದಿಗೆ ನಾವೆಲ್ಲರೂ ಬೆಳೆದು ಬಂದಿದ್ದು: ಸುನಿಲ್ ಕುಮಾರ್

Ad Widget . Ad Widget .

ಮಂಗಳೂರು: ಮಹಾನಗರ ಪಾಲಿಕೆಯ (ಎಂಸಿಸಿ) ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ ನಂತರ ಲೇಡಿಹಿಲ್ ವೃತ್ತವನ್ನು ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡಲಾಗಿದ್ದು, ಏಪ್ರಿಲ್ 14 ರಂದು ಗುರುವಾರ ಶಿಲಾನ್ಯಾಸ ನೆರವೇರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್‌ಕುಮಾರ್‌ ಫಲಕ ಅನಾವರಣಗೊಳಿಸಿದರು. ಸುನೀಲ್ ಕುಮಾರ್ ಮಾತನಾಡಿ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಚಾರಧಾರೆಯೊಂದಿಗೆ ನಾವೆಲ್ಲರೂ ಬೆಳೆದು ಬಂದಿದ್ದು, ಲೇಡಿಹಿಲ್ ವೃತ್ತವನ್ನು ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುತ್ತಿರುವುದು ನಮಗೆಲ್ಲ ಹೆಮ್ಮೆಯ ಕ್ಷಣ ಎಂದರು.

ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಲೇಡಿಹಿಲ್ ಸರ್ಕಲ್ ಅನ್ನು ಬ್ರಹ್ಮ ಶ್ರೀ ನಾರಾಯಣ ಗುರು ಸರ್ಕಲ್ ಎಂದು ಮರುನಾಮಕರಣ ಮಾಡಬೇಕೆಂಬ ಬಹುದಿನಗಳ ಬೇಡಿಕೆಯಾಗಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ನಾನು ಶಾಸಕನಾದಾಗ ಈ ವೃತ್ತಕ್ಕೆ ಮರುನಾಮಕರಣ ಮಾಡುವುದಾಗಿ ಕಳೆದ ವರ್ಷ ಆಶ್ವಾಸನೆ ನೀಡಿದ್ದೆ. ಇದಕ್ಕೆ ರಾಜ್ಯ ಸರ್ಕಾರದ ಅನುಮೋದನೆಗೆ ನೀಡಿದ್ದು, ಇದೀಗ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರನ್ನು ಮರುನಾಮಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಡಾ.ಭರತ್ ವೈ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಾರ್ಪೊರೇಟರ್ ಸಂಧ್ಯಾ ಆಚಾರ್ಯ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *