ಸಮಗ್ರ ನ್ಯೂಸ್ : ಈಶ್ವರಪ್ಪ ರಾಜೀನಾಮೆ ಘೋಷಣೆ ಮಾಡಿದ ಬಳಿಕ ತರಾತುರಿಯಲ್ಲಿ 29 ಪಿಡಿಓಗಳ ವರ್ಗಾವಣೆ ಮಾಡಿರುವುದರಲ್ಲಿ ಕಮಿಷನ್ ಪಡೆದಿರುವ ಬಗ್ಗೆ ಕಾಂಗ್ರೆಸ್ ಆರೋಪಿಸಿದೆ.
ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ ಮಾಡಿ ಅಧಿಕೃತವಾಗಿ ನೀಡಲು ಸಾಕಷ್ಟು ಸಮಯ ತೆಗೆದುಕೊಂಡು, ತರಾತುರಿಯಲ್ಲಿ 29 ಪಿಡಿಓಗಳನ್ನು ವರ್ಗಾವಣೆ ಮಾಡಿದ್ದಾರೆ.
ಈ ತರಾತುರಿಯ ವರ್ಗಾವಣೆಯಲ್ಲಿ ಎಷ್ಟು ಪರ್ಸೆಂಟ್ ಹಗರಣವಿದೆ? ಇನ್ನುಳಿದ ಗುತ್ತಿಗೆದಾರರಿಂದ ಬಾಕಿಯಿದ್ದ 40 ಪರ್ಸೆಂಟ್ ವಸೂಲಿಗಾಗಿಯೇ ಇಷ್ಟು ಸಮಯ ತಗೆದುಕೊಂಡಿದ್ದಾ? ಎಂದು ಸರ್ಕಾರವನ್ನು ಕಾಂಗ್ರೆಸ್ ಪ್ರಶ್ನಿಸಿದೆ.