Ad Widget .

ಮಂಗಳೂರು: ಮೀನಿನ ಪ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ| ಮೂವರ ಸಾವು; ಐದು ಮಂದಿ ಗಂಭೀರ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಎಸ್​ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, ಐವರ ಸ್ಥಿತಿ ಗಂಭೀರವಾಗಿದೆ.

Ad Widget . Ad Widget .

ಎಸ್​ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನಿನ ಫ್ಯಾಕ್ಟರಿಯ ಟ್ಯಾಂಕೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ.

Ad Widget . Ad Widget .

ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರು ಮೃತಪಟ್ಟಿದ್ದಾರೆ. 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು. ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತ ದುರ್ದೈವಿಗಳು. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ.

Leave a Comment

Your email address will not be published. Required fields are marked *