ಕೆಜಿಎಫ್-2 ಸಿನಿಮಾ ನೋಡುತ್ತಿದ್ದಾಗ ಹಾರಿದ ಗುಂಡು; ಯುವಕ ಗಂಭೀರ

ಹಾವೇರಿ: ಕೆಜಿಎಫ್-2 ಸಿನಿಮಾ ನೋಡುತ್ತಿದ್ದ ವೇಳೆ ಗುಂಡು ಹಾರಿದ ಪರಿಣಾಮ ಯುವಕನೊಬ್ಬನ ಹೊಟ್ಟೆಗೆ ಗಾಯವಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಗಾಯಾಳುವನ್ನು ವಸಂತ ಕುಮಾರ್ ಎಂದು ಗುರುತಿಸಲಾಗಿದೆ.

Ad Widget ... ..

ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಗುಂಡುಹಾರಿದೆ. ಈ ಗುಂಡು ವಸಂತ ಕುಮಾರ್ ಹೊಟ್ಟೆಗೆ ತಗುಲಿದೆ. ಕೂಡಲೇ ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Ad Widget

ಚಿತ್ರಮಂದಿರದಲ್ಲಿ ಗುಂಡು ಹಾರಿರುವುದನ್ನು ಎಸ್‍ಪಿ ಹನುಮಂತರಾಯ ಖಚಿತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *