ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬರೆದಿದ್ದ ಪೊಲೀಸರಿಗೆ ಲಭ್ಯವಾಗಿದೆ.
2021 ರ ಫೆಬ್ರವರಿ 15 ರಂದು ಆಗಿನ ಬೆಳಗಾವಿ ಜಿ.ಪಂ ಅಧ್ಯಕ್ಷೆ ಆಶಾ ಐಹೋಳೆ ಹಿಂಡಲಗಾ ಗ್ರಾಮದಲ್ಲಿ ರಸ್ತೆ ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.
2021 ರ ಫೆಬ್ರವರಿ 15 ರಂದು 108 ಕಾಮಗಾರಿಗಳ ಪಟ್ಟಿ ಸಮೇತ ಆಶಾ ಐಹೋಳೆ ಪತ್ರ ಬರೆದಿದ್ದರು. ಅನುಮೋದನೆಗಾಗಿ ಆದೇಶಿಸಲಾಗಿದೆ ಎಂದು 2022 ರ ಫೆಬ್ರವರಿ 26 ರಂದು ಸಹಿ ಮಾಡಿರುವ ಲೆಟರ್ ಲಭ್ಯವಾಗಿದೆ. ಮಾರ್ಚ್ 5 ರಂದು ಆದೇಶದ ಪ್ರತಿ ನೀಡಲಾಗುವುದು ಎಂದು ಕೈಬರಹದಲ್ಲಿ ಬರೆದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸೀಲ್ ಹಾಕಲಾಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ವಾಟ್ಸಪ್ ನಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ಪ್ರಸ್ತಾಪಿಸಿ ಉಡುಪಿಯ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.