ಮತ್ತಷ್ಟು ಹೆಚ್ಚಾಗಲಿದೆ ಅಡುಗೆ ಎಣ್ಣೆ ಬೆಲೆ.

ಸಮಗ್ರ ನ್ಯೂಸ್: ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ ನಡುವೆಯೂ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಿದೆ. ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ವಿಶ್ವದ ಎಲ್ಲ ರಾಷ್ಟ್ರಗಳಿಗೂ ತಟ್ಟಿದ್ದು, ಭಾರತದ ಮೇಲೂ ಇದು ಪರಿಣಾಮ ಬೀರಿದೆ.

Ad Widget ... ..

ತಾಳೆಎಣ್ಣೆ ರಫ್ತು ನಿಷೇಧಿಸಲು ಇಂಡೋನೇಷ್ಯಾ ತೀರ್ಮಾನಿಸಿರುವ ಕಾರಣ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ತೀವ್ರವಾಗಿ ಏರಿಕೆಯಾಗಬಹುದು ಹೇಳಲಾಗಿದೆ.

Ad Widget

ಈಗಾಗಲೇ ಅಡುಗೆ ಎಣ್ಣೆ ಬೆಲೆ ಹೆಚ್ಚಿದ್ದು, ಈಗ ಮತ್ತಷ್ಟು ಏರಿಕೆಯಾಗಬಹುದು ಎಂಬ ವಿಷಯ ಆತಂಕಕ್ಕೆ ಕಾರಣವಾಗಿದೆ. ಅಡುಗೆ ಎಣ್ಣೆ ಬೆಲೆ ಏರಿಕೆ ಪರಿಣಾಮ ಹೋಟೆಲ್ ಗಳ ಆಹಾರ ಪದಾರ್ಥಗಳ ಬೆಲೆ ಮೇಲೂ ಬೀರಲಿದೆ.

Leave a Comment

Your email address will not be published. Required fields are marked *