ಸಮಗ್ರ ನ್ಯೂಸ್: ಪ್ರತಿ ಲೀಟರ್ ಹಾಲಿಗೆ ಕನಿಷ್ಠ 3 ರೂ. ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳನ್ನು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದ್ದಾರೆ.
ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿ ಬಹುತೇಕ ಎಲ್ಲ ವೆಚ್ಚಗಳು ಶೇ.30 ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಅನಿವಾರ್ಯವಾಗಿದೆ ಎಂದು ಸಿಎಂ ಬಳಿ ವಿನಂತಿಸಿಕೊಂಡಿದ್ದಾರೆ.
ನಂದಿನಿ ಹಾಲಿನ ಮಾರಾಟ ದರಕ್ಕೆ ತುಲನೆ ಮಾಡಿದಾಗ ಇತರೇ ಸಂಸ್ಥೆಗಳ ದರವು ಪ್ರತಿ ಲೀಟರ್ಗೆ ರೂ. 8 ರಿಂದ 10 ರೂ. ಹೆಚ್ಚಳವಾಗಿದೆ. ಹೆಚ್ಚಳ ಮಾಡಲಿರುವ 3 ರೂ.ಗಳಲ್ಲಿ ಕನಿಷ್ಠ ರೂ. 2 ನ್ನು ಹಾಲು ಉತ್ಪಾದಕರಿಗೆ, ಉಳಿದ 1 ರೂ.ನ್ನು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಮತ್ತು ಹಾಲು ಮಾರಾಟಗಾರರಿಗೆ ನೀಡಲಾಗುವುದು ಎಂದು ವಿವರಿಸಿದ್ದಾರೆ.