ಸಮಗ್ರ ನ್ಯೂಸ್: ಕೊರೊನಾ ಸವಾಲು ಇನ್ನೂ ಮುಗಿದಿಲ್ಲ. ಶಾಲೆ ಆರಂಭದ ಹೊತ್ತಲ್ಲಿ ಕರೊನಾ 4ನೇ ಅಲೆಯ ಭೀತಿ ಹುಟ್ಟಿದೆ.
ದೇಶದ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ರಾಜ್ಯಗಳಲ್ಲಿ ಪೆಟ್ರೋಲ್, ಡಿಸೇಲ್ ದರ ಕಡಿಮೆ ಮಾಡಲೂ ಪ್ರಧಾನಿ ಮನವಿಯನ್ನು ಮಾಡಿಕೊಂಡಿದ್ದಾರೆ.
ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಆತಂಕ ಹಿನ್ನೆಲೆ ಬುಧವಾರ ಬೆಳಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ ಪ್ರಧಾನಿ ಮೋದಿ ಈಗಾಗಲೇ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಎಲ್ಲರಿಗೂ ಲಸಿಕೆ ನೀಡಲಾಗಿದೆ. ಬೂಸ್ಟರ್ ಡೋಸ್ ನೀಡಲಾಗುತ್ತಿದೆ. 6-12 ವರ್ಷದ ಮಕ್ಕಳಿಗೂ ಕರೊನಾ ಸಲಿಕೆ ಹಾಕಲು ಅನುಮತಿ ಸಿಕ್ಕಿದೆ. ಎಲ್ಲ ಮಕ್ಕಳಿಗೂ ಆದಷ್ಟು ಬೇಗ ಲಸಿಕೆ ವಿತರಣೆ ಮಾಡಲಾಗುತ್ತೆ. ಈಗಾಗಲೇ ಹಲವು ಶಾಲೆಗಳು ಆರಂಭವಾಗಿವೆ. ಇಂತಹ ಸಂದರ್ಭದಲ್ಲಿ ಕರೊನಾ 4ನೇ ಅಲೆ ಪೋಷಕರಲ್ಲಿ ಸಹಜವಾಗಿ ಆತಂಕ ಹುಟ್ಟಿಸಿದೆ. ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ರಾಜ್ಯ ಎರಡು ನಿಯಮಗಳನ್ನು ಪಾಲಿಸುತ್ತಿದೆ ಎಂದು ಹೇಳಿದ್ದಾರೆ.