12ರ ಬಾಲಕನಿಂದ 5ವರ್ಷದ ಬಾಲಕಿಯ ಅತ್ಯಾಚಾರ

ಸಮಗ್ರ ನ್ಯೂಸ್: 12 ವರ್ಷದ ಬಾಲಕನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್ ನ ಖುಂತಿ‌ ಜಿಲ್ಲೆಯಲ್ಲಿ ನಡೆದಿದೆ.

Ad Widget ... ..

ಬಾಲಕಿ ತನ್ನ ಮನೆಯ ಸಮೀಪದ ಅಂಗಡಿಯೊಂದಕ್ಕೆ ತಂಪು ಪಾನೀಯ ಖರೀದಿಸಲು ಹೋದಾಗ ಅಲ್ಲಿ ಒಬ್ಬನೇ ಇದ್ದ ಹುಡುಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕಳೆದ‌ ಶನಿವಾರ ತೋರ್ಪಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಜಿಲ್ಲೆಯಾದ್ಯಂತ ಬೆಚ್ಚಿಬೀಳಿಸಿದೆ.

Ad Widget

ಘಟನೆ ಸಂಬಂಧ ಬಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಹೇಳಿದ್ದಾರೆ. ರಿಮಾಂಡ್ ಮೇಲೆ ಬಾಲಕನನ್ನು ರಾಂಚಿಯ ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

Leave a Comment

Your email address will not be published. Required fields are marked *