ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಬೆನ್ನಲ್ಲೇ, ಸಾರಿಗೆಯಲ್ಲೂ` ಟಫ್ ರೂಲ್ಸ್ ಜಾರಿಗೆ ತರಲು ಇದಾಗಲೆ ಮುಂದಾಗಿದೆ. ಸಾರಿಗೆಯಲ್ಲಿ ನಿರ್ದಿಷ್ಟ ಪ್ರಯಾಣಿಕರ ಸಂಚಾರಕ್ಕೆ ನಿಯಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಮೆಟ್ರೋ ಸಂಚಾರಕ್ಕೂ ಟಫ್ ರೂಲ್ಸ್ ಮಾಡಲಾಗಿದ್ದು, ಪ್ರಯಾಣಿಕರಿಗೆ ಮಾಸ್ಕ್ ಸ್ಯಾನಿಟೈಸರ್ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ದಬಲ್ ದೋಸ್ ವ್ಯಾಕ್ಸಿನೇಷನ್ ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗುತ್ತದೆ. ಅಲ್ಲದೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನಿಲ್ದಾಣಗಳಲ್ಲಿ ದಿನಕ್ಕೆ 2 ಬಾರಿ ಸ್ಯಾನಿಟೈಜರ್ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ಮಾತ್ರ 60 ವರ್ಷ ಮೇಲ್ಪಟ್ಟವರಿಗೆ ಪ್ರಯಾಣಕ್ಕೆ ಅವಕಾಶ ಕೊಡಬೇಕೆಂದು ಟಫ್ ರೂಲ್ಸ್ ತರಲು ಚಿಂತನೆ ನಡೆಸಲಾಗುತ್ತಿದೆ.