Ad Widget .

ಕರ್ನಾಟಕದಲ್ಲಿ ಕನ್ನಡವೇ ಮೊದಲು| ಕಿಚ್ಚನ ಬೆನ್ನಿಗೆ ನಿಂತ ಸಿಎಂ ಬೊಮ್ಮಾಯಿ

Ad Widget . Ad Widget .

ಸಮಗ್ರ ನ್ಯೂಸ್: ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಆದರೆ ಇದೀಗ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಪರ ನಿಂತಿದ್ದಾರೆ. ಭಾಷಾವಾರು, ಪ್ರಾಂತವಾರು ಆದ ಮೇಲೆ ಎಲ್ಲವೂ ಮಾತೃಭಾಷೆ ಆಗಿದೆ. ನಮ್ಮ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಎಂದು ನಟ ಸುದೀಪ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಬಲ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

ಹಿಂದಿ ಭಾಷೆಯ ಕುರಿತು ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ಮಧ್ಯೆ ವಿವಾದದ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಸಿಎಂ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸ್ಪಷ್ಟಪಡಿಸಿದರು.

Leave a Comment

Your email address will not be published. Required fields are marked *