Ad Widget .

ಮಂಗಳೂರು: ಗುಟ್ಕಾ ಜಗಿದ ಬಸ್ ಚಾಲಕರಿಗೆ 5000 ದಂಡ ವಿಧಿಸಿದ ಆರ್ ಟಿಒ ಅಧಿಕಾರಿಗಳು!

Ad Widget . Ad Widget .

ಸಮಗ್ರ ನ್ಯೂಸ್: ಚಾಲನೆ ವೇಳೆ ಗುಟ್ಕಾ ಜಗಿಯುತ್ತಿದ್ದ ಬಸ್‌ ಚಾಲಕರಿಗೆ‌ ಮಂಗಳೂರು ಆರ್‌ಟಿಒ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಬಿಜೈ ಬಳಿ ರಾತ್ರಿ ದಾಖಲೆ ತಪಾಸಣೆ ಸಂದರ್ಭ 2 ಬಸ್‌ಗಳ ಚಾಲಕರು ಗುಟ್ಕಾ ಜಗಿಯುತ್ತ ಅಧಿಕಾರಿಗಳ ಮುಂದೆ ಬಂದರು.

Ad Widget . Ad Widget .

ಇದನ್ನು ಗಮನಿಸಿದ ಆರ್‌ಟಿಒ ಅಧಿಕಾರಿಗಳು ಇಬ್ಬರು ಚಾಲಕರಿಗೂ ತಲಾ 5,000 ರೂ. ದಂಡ ವಿಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್‌ಟಿಒ ಆರ್‌.ಎಂ. ವರ್ಣೇಕರ್‌, “ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಮಾತ್ರವಲ್ಲದೆ ಯಾವುದೇ ರೀತಿಯ ಅಮಲು ಪದಾರ್ಥಗಳನ್ನು ಸೇವಿಸಿ ಚಲಾಯಿಸುವವರ ವಿರುದ್ಧ ಕೂಡ ಪ್ರಕರಣ ದಾಖಲಿಸಿ, ದಂಡ ವಿಧಿಸಲು ಅವಕಾಶವಿದೆ. ಅದರಂತೆ ದಂಡ ವಿಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *