ಸಮಗ್ರ ನ್ಯೂಸ್: ಠಾಣೆಯೊಳಗೆ ಮಹಿಳಾ ದೂರುದಾರರಿಂದ ಮಸಾಜ್ ಮಾಡಿಸಿಕೊಂಡಿದ್ದ ಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಈ ಘಟನೆ ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ವರದಿಯಾಗಿದ್ದು, ಮಹಿಳಾ ದೂರುದಾರರಿಂದ ಪೊಲೀಸ್ ಮಸಾಜ್ ಮಾಡಿಸಿಕೊಂಡ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಔಟ್‍ಪೋಸ್ಟ್‌ನ ಹಿರಿಯ ಅಧಿಕಾರಿ ಶಶಿಭೂಷಣ ಸಿನ್ಹಾ ಅವರು ಫೋನ್‍ನಲ್ಲಿ ಮಾತನಾಡುತ್ತಾ ಮಹಿಳೆಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ದೃಶ್ಯವನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಪೊಲೀಸ್ ಔಟ್‍ಪೋಸ್ಟ್‌ನಲ್ಲಿರುವ ವಸತಿ ಕ್ವಾರ್ಟರ್‌ನಿಂದ ಈ ವೀಡಿಯೋವನ್ನು ಸೆರೆಹಿಡಿಯಲಾಗಿದೆ.