ಸಮಗ್ರ ನ್ಯೂಸ್: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತಪಡಿರುವ ಪ್ರಾಮಾಣಿಕ ಪಿಎಸ್ಐ ಅಭ್ಯರ್ಥಿಗಳು ನಮಗೆ ನ್ಯಾಯಬೇಕು ಯಾರೋ ಮಾಡಿರುವ ತಪ್ಪಿಗೆ, ನಮಗೆ ಈ ರೀತಿ ಯಾಕೆ ಅನ್ಯಾಯ? ಎಂದು ಪ್ರಶ್ನಿಸುತ್ತಿದ್ದಾರೆ.
ಈ ಕುರಿತಂತೆ ಇಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಉಪವಾಸ ಕೈಗೊಳ್ಳಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಪಿಎಸ್‌ಐ ಎಕ್ಸಾಂನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಪಟ್ಟಂತೆ ಸದ್ಯ ಸಿಐಡಿ ಪೋಲಿಸರ ಬಂಧನದಲ್ಲಿರುವ ಪ್ರಮುಖ ಆರೋಪಿ ದಿವ್ಯ ಹಾಗರಗಿ ಸೇರಿದಂತೆ ಒಟ್ಟು 7 ಮಂದಿಯನ್ನು ಶುಕ್ರವಾರ ಕಲಬುರಗಿ ಜಿಲ್ಲಾ ನ್ಯಾಯಾಲಯದ ಮೂರನೇ ಜೆಎಂಎಫ್ ನ್ಯಾಯಾಧೀಶರು ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ಅರ್ಚನ, ಸುನೀತ, ಕಾಳಿದಾಸ್, ಸುನೀತಾ ಪಾಟೀಲ್, ಸುರೇಶ್ ಕಾಟೇಗಾವ್, ಸದ್ದಾಂ, ದಿವ್ಯಾ ಹಾಗರಗಿ, ಆರೋಪಿಗಳನ್ನು ಸಿಐಡಿ ವಶಕ್ಕೆ ನೀಡಲು ನ್ಯಾಯಾಧೀಶರ ಬಳಿ ಸಿಐಡಿ ಪರ ವಕೀಲರು ಮನವಿ ಮಾಡಿಕೊಂಡಿದ್ದರು, ಅದರಂಥೆ ಅವರನ್ನು ವಶಕ್ಕೆ ನೀಡಲು ನ್ಯಾಯಾಧೀಶರು ಮಾನ್ಯ ಮಾಡಿದ್ದಾರೆ.
545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಸಂಬಂಧ ಪ್ರಮುಖ ಆರೋಪಿ ದಿವ್ಯಾ ಹಾಗರಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದರು.
ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು ಎಂದು ತನಿಖೆ ವೇಳೆ ತಿಳಿದುಬಂದಿತ್ತು. ಬಳಿಕ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದರು. ಸತತ ಹುಡುಕಾಟದ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿದ್ದ ಸಿಐಡಿ ತಂಡವು ತನಿಖೆಗೆ ಅಸಹಕಾರ, ಆರೋಪಿಗಳ ನಾಪತ್ತೆಗೆ ಬೆಂಬಲ ಆರೋಪದ ಮೇಲೆ ರಾಜೇಶ್ ಹಾಗರಗಿಯನ್ನು ಬಂಧಿಸಿದ್ದರು.