ಸಮಗ್ರ ನ್ಯೂಸ್: ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಕಾರಿನ ಟೈರ್ ಸಿಡಿದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗುಜರಾತ್ ಹಾಗೂ ಕೇರಳ ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗುಜರಾತ್ ಮೂಲದ ಕಾರು ದಾವಣಗೆರೆ ಕಡೆಯಿಂದ ಹುಬ್ಬಳ್ಳಿಗೆ ಹೊರಟಿದ್ದ ವೇಳೆ ಕಾರಿನ ಟೈರ್ ಬ್ಲಾಸ್ಟ್ ಆಗಿ ರಸ್ತೆ ವಿಭಜಕಕ್ಕೆ ದಾಟಿ ಪಕ್ಕದ ರಸ್ತೆಯಲ್ಲಿ ಎದುರಿಗೆ ಬರುತ್ತಿದ್ದ ಕೇರಳದ ಕಾರಿಗೆ ಡಿಕ್ಕಿ ಹೊಡೆದಿದೆ.