ಸಮಗ್ರ ನ್ಯೂಸ್: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣನ ಅಬ್ಬರ ದಿನೇದಿನೇ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಹಗುರ ಮಳೆಯಾಗಲಿದೆ.
ಮೇ 5ರ ನಂತರ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
ಕರ್ನಾಟಕ ಮಾತ್ರವಲ್ಲದೆ ಇಂದು ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಕೇರಳದಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.