Ad Widget .

ಮಸೀದಿಗಳಲ್ಲಿ ‌ಧ್ವನಿವರ್ಧಕ ಅಳವಡಿಕೆ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ|

ಸಮಗ್ರ ನ್ಯೂಸ್: ‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಅಲಹಾಬಾದ್‌ ಹೈಕೋರ್ಟ್ ಹೇಳಿದೆ. ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

Ad Widget . Ad Widget .

ಧ್ವನಿವರ್ಧಕಗಳನ್ನು ತೆರವು ಗೊಳಿಸುವಂತೆ ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಎಸ್‌ಡಿಎಂ ಆದೇಶವು “ಕಾನೂನುಬಾಹಿರ” ಮತ್ತು ಇದು “ಮೂಲಭೂತ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದರು.

Ad Widget . Ad Widget .

ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ಈ ಆದೇಶ ನೀಡಿದ್ದು, ”ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂದು ಕಾನೂನು ಹೇಳುತ್ತದೆ” ಎನ್ನುವ ಮೂಲಕ ಅರ್ಜಿಯನ್ನು ತಳ್ಳಿಹಾಕಿದ್ದಾರೆ.

Leave a Comment

Your email address will not be published. Required fields are marked *