ಸಮಗ್ರ ನ್ಯೂಸ್: ಕಳೆದೆರಡು ಮೂರು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಮತ್ತೆ ಮುಂದಿನ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಮೇ.6ರಿಂದ ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ, ಕರ್ನಾಟಕದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮುಂದಿನ ನಾಲ್ಕು ದಿನ ಕರ್ನಾಟಕ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.