Ad Widget .

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಕೆ.ಸೋಮನಾಥ್ ನಾಯಕ್ ಗೆ ಜೈಲು ಖಾಯಂ| ರಿಟ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಬೆಳ್ತಂಗಡಿಯ ಸಿವಿಲ್ ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಬೆಳ್ತಂಗಡಿ ನ್ಯಾಯಾಲಯ ವಿಧಿಸಿದ ಜೈಲು ಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗೂ ದಂಡನೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ವಜಾಗೊಂಡಿದೆ.

Ad Widget . Ad Widget .

ಎರಡೂ ಕಡೆಯ ವಾದ ಆಲಿಸಿದ ಉಚ್ಚ ನ್ಯಾಯಾಲಯವು ಮೇ. 5 ರಂದು ತನ್ನ 128 ಪುಟಗಳ ಸುಧೀರ್ಘ ತೀರ್ಪು ಪ್ರಕಟಿಸಿ ಬೆಳ್ತಂಗಡಿ ಸಿವಿಲ್ ನ್ಯಾಯಾಲಯಗಳ ಆದೇಶವನ್ನು ಎತ್ತಿ ಹಿಡಿದು ಸೋಮನಾಥ ನಾಯಕ್‌ರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.

Ad Widget . Ad Widget .

ಸೋಮನಾಥ ನಾಯಕ್‌ ಹೆಗ್ಗಡೆಯವರ ವಿರುದ್ಧ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಸಹ ಉಲ್ಲಂಘಿಸಿ ಸುಳ್ಳು ಆರೋಪ ಮಾಡಿರುವುದು ಸಾಬೀತಾಗಿದೆ.
ಹೆಗ್ಗಡೆಯವರು ಮಿತಿಗಿಂತ ಜಾಸ್ತಿ ಸ್ಥಿರಾಸ್ತಿ ಹೊಂದಿರುತ್ತಾರೆ ಎಂಬುವುದಾಗಿ ಮಾಡುತ್ತಿರುವ ಆರೋಪಗಳು ಸುಳ್ಳು.
ಈ ಪ್ರಕರಣದ ದಾಖಲೆಗಳನ್ನು ಪರಾಮರ್ಶಿಸುವಾಗ ಹೆಗ್ಗಡೆಯವರು ಮತ್ತವರ ಕುಟುಂಬದವರು ತಮ್ಮ ಬಹಳಷ್ಟು ಆಸ್ತಿಗಳನ್ನು ಸಾಗುವಳಿದಾರರಿಗೆ ಬಿಟ್ಟುಕೊಟ್ಟಿರುವುದು ಕಂಡುಬರುತ್ತದೆ.
ರಾಜ್ಯದೆಲ್ಲೆಡೆ ತುಳಿತಕ್ಕೊಳಗಾದವರ ಏಳಿಗೆಗಾಗಿ, ಮಹಿಳಾ ಸಬಲೀಕರಣಕ್ಕಾಗಿ, ಇನ್ನೂ ಹಲವಾರು ಸಮಾಜಮುಖಿ ಕೈಂಕರ್ಯಗಳನ್ನು ಹೆಗ್ಗಡೆಯವರು ಮಾಡುತ್ತಿರುವುದು ಕಂಡುಬರುತ್ತದೆ.
ಹೆಗ್ಗಡೆಯವರಿಗೆ ಅವರ ಸಮಾಜಮುಖಿ ಸೇವೆಗಳನ್ನು ಪರಿಗಣಿಸಿ ನಮ್ಮ ದೇಶದ ಸರಕಾರಗಳು ಪದ್ಮವಿಭೂಷಣ ಸಹಿತ ಹಲವಾರು ಉನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸಿರುವುದು ಕಂಡುಬರುತ್ತದೆ.
ನಮ್ಮ ದೇಶದ ಜನತೆಯು ಹೆಗ್ಗಡೆಯವರನ್ನು ಧರ್ಮಾಧಿಕಾರಿಯೆಂದು ಗೌರವ ಭಾವನೆಯಿಂದ ಕಾಣುತ್ತಿದ್ದಾರೆ.
ಹೆಗ್ಗಡೆಯವರ ಸಚ್ಚಾರಿತ್ರ್ಯಕ್ಕೆ ಹಾಗೂ ಕ್ಷೇತ್ರದ ಘನತೆಗೆ ದಕ್ಕೆ ತರುವ ದುರುದ್ದೇಶದಿಂದ ಸೋಮನಾಥ ನಾಯಕ್‌ರವರು ಎಗ್ಗಿಲ್ಲದೆ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನೂ ಸಹ ಉಲ್ಲಂಘಿಸಿ ಸುಳ್ಳು ಆರೋಪಗಳನ್ನು ಸಾರ್ವಜನಿಕ ಮಾಧ್ಯಮ ಹಾಗು ಜಾಲತಾಣಗಳಲ್ಲಿ ಮಾಡುತ್ತಿರುವುದು ಕ್ಷಮಾರ್ಹವಲ್ಲ.

ಹೆಗ್ಗಡೆಯವರು ಹಾಗೂ ಅವರ ಕುಟುಂಬದವರ ವಿರುದ್ಧ ಆರೋಪ ಮಾಡುವುದರ ಹೊರತು ಸಮಾಜಕ್ಕೆ ತನ್ನ ಕೊಡುಗೆ ಏನು ಎಂಬುವುದನ್ನು ನ್ಯಾಯಾಲಯಕ್ಕೆ ತಿಳಿಸುವಲ್ಲಿ ಸಹ ಸೋಮನಾಥ ನಾಯಕ್ ವಿಫಲವಾಗಿದ್ದಾರೆ.
ನ್ಯಾಯಾಲಯದ ಮುಂದಿರುವ ದಾಖಲೆಗಳಲ್ಲಿ ಕ್ಷೇತ್ರ ಹಾಗೂ ಶ್ರೀ ಹೆಗ್ಗಡೆಯವರಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಗಳು ಎದ್ದು ಕಾಣುತ್ತಿವೆ.
ನ್ಯಾಯಾಲಯದ ಮುಂದೆ ಸೋಮನಾಥ ನಾಯಕ್ ಕೊನೆಯ ಕ್ಷಣದಲ್ಲಿ, ತಾನು ಎಸಗಿರುವ ಅಪರಾಧವು ಸಾಬೀತಾಗುವ ಎಲ್ಲಾ ಲಕ್ಷಣಗಳು ಕಂಡುಬಂದಾಗ ತನ್ನ ಕೃತ್ಯಗಳ ಬಗ್ಗೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿರುವುದು ಆತನ ಧಾಷ್ಟತನವಲ್ಲದೆ ನ್ಯಾಯಾಲಯದ ಘನತೆಯ ಬಗ್ಗೆ ಆತನಿಗಿರುವ ಕೇವಲ ಭಾವವನ್ನು ಬಿಂಬಿಸುತ್ತದೆ.
ಈ ಪ್ರಕರಣದಲ್ಲಿ ನ್ಯಾಯಾಲಯದ ಮೇಲೆ ಸಾರ್ವಜನಿಕರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಕ್ಕಾಗಿ ಮತ್ತು ನ್ಯಾಯಾಲಯದ ಘನತೆಯನ್ನು ರಕ್ಷಿಸುವ ಸಲುವಾಗಿ ಹಾಗೂ ಸೋಮನಾಥ ನಾಯಕ್‌ರನ್ನು ಶಿಕ್ಷಿಸದಿದ್ದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಕಾನೂನಿನ ಉದ್ದೇಶ ಹಾಗು ಸಾಮರ್ಥ್ಯವನ್ನು ಸಾರುತ್ತಾ ಆದೇಶವನ್ನು ನೀಡಿದೆ.
ಪ್ರಕರಣದ ಎಲ್ಲ ಸಾಕ್ಷ್ಯಗಳನ್ನು ಹಾಗೂ ವಾಸ್ತವಾಂಶಗಳನ್ನು ತನಿಖಾ ಹಾಗು ಅಪಾರ ನ್ಯಾಯಾಲಯ ಕೂಲಂಕುಷವಾಗಿ ವಿರ್ಮಶಿಸಿದ ನಂತರ ಸದ್ರಿ ನ್ಯಾಯಾಲಯಗಳು ಸೋಮನಾಥ್ ನಾಯಕ್ ಎಸಗಿರುವ ಅಪರಾಧದ ತೀವ್ರತೆಯನ್ನು ಮನಗಂಡು ನೀಡಿರುವ ಶಿಕ್ಷೆ ನ್ಯಾಯಾಲಯದ ಘನತೆ ಹಾಗೂ ಹೆಗ್ಗಡೆಯವರ ಸಚ್ಚಾರಿತ್ಯಗಳ ರಕ್ಷಣೆ ನಿಟ್ಟಿನಲ್ಲಿ ಮಾಡಿರುವ ಕಾನೂನುರಿತ್ಯಾ ಪ್ರಬುದ್ಧವಾಗಿರುವ ಆದೇಶಗಳಾಗಿರುವುದಾಗಿ ಹೈಕೋರ್ಟ್ ಹೇಳಿದೆ.

ಬೆಳ್ತಂಗಡಿ ನ್ಯಾಯಾಲಯ ಈಗಾಗಲೇ ಸೋಮನಾಥ ನಾಯಕ್‌ರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿದ್ದು, ನಾಯಕ್ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *