ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯೋರ್ವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದ ಬಾಡಿಗೆ ಮನೆಯಲ್ಲಿ ಮೇ 6ರ ಸಂಜೆ ಬೆಳಕಿಗೆ ಬಂದಿದೆ.
ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಅವರ ಪುತ್ರಿ ಆಯೀಶಾ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಕಳೆದ ವರ್ಷ ಕಾಸರಗೋಡಿನ ಯುವಕನೊಂದಿಗೆ ಈಕೆಯ ವಿವಾಹವಾಗಿದ್ದು, ಪತಿ ವಿದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ. ವಿವಿಧ ಕಡೆಗಳಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಇವರು ಇತ್ತೀಚೆಗೆ ಗಾಂಧೀನಗರಕ್ಕೆ ಬಾಡಿಗೆ ಮನೆಗೆ ಬಂದಿದ್ದರು ಎನ್ನಲಾಗಿದೆ. ಜೀವನದಲ್ಲಿ ಮನನೊಂದು ಕೃತ್ಯ ಎಸಗಿರಬಹುದೆಂದು ತಾಯಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.