ಸಮಗ್ರ ನ್ಯೂಸ್: ಪದವಿ ಪಾಸಾದವರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕರ್ನಾಟಕ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ. ದೇಶಾದ್ಯಂತ ತನ್ನ ಶಾಖೆಗಳು / ಕಚೇರಿಗಳಿಗಾಗಿ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ karnatakabank.com ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ ಶೇ.60 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಶುಲ್ಕ: SC ಮತ್ತು ST ವರ್ಗದ ಅಭ್ಯರ್ಥಿಗಳು 600 ಶುಲ್ಕವನ್ನು ಪಾವತಿಸಬೇಕು. ಇತರೆ ವರ್ಗದ ಅಭ್ಯರ್ಥಿಗಳು ಶುಲ್ಕವಾಗಿ 700 ಅರ್ಜಿ ಶುಲ್ಕವನ್ನ ಪಾವತಿಸಬೇಕು.
ವಯೋಮಿತಿ: ಕರ್ಣಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 26 ವರ್ಷಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.
ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆ ಆನ್‌ಲೈನ್ ಪರೀಕ್ಷೆಯ ಮೂಲಕ ನಡೆಯಲಿದ್ದು, ಪರೀಕ್ಷೆ ಜೂನ್ 22 2022 ರಲ್ಲಿ ನಡೆಯುವ ಸಾಧ್ಯತೆಗಳಿದೆ. ಪರೀಕ್ಷೆಯು ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ನವದೆಹಲಿಯಲ್ಲಿ ನಡೆಯಲಿದೆ.