ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಗಂಡನ ಕಿರುಕುಳ ತಡೆಯಲಾದರೆ ಮೈಗೆ ಸಾನಿಟೈಸರ್ ಸುರಿದು ಬೆಂಕಿ ಹಚ್ಚಿಕೊಂಡು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್.ಟಿ. ನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಶಾಜಿಯಾ ಭಾನು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

Ad Widget ... ..

ಗಂಡ ಇಮ್ರಾನ್ ಖಾನ್ ವಿರುದ್ಧ ಶಾಜಿಯಾ ಪೋಷಕರು ಆರ್.ಟಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಂಡ ಬೇರೆ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಗಂಡ ಹೆಂಡತಿ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ವಿಚಾರ ಮುಂದಿಟ್ಟುಕೊಂಡು ಗಂಡ ಇಮ್ರಾನ್ ಖಾನ್ ಪತ್ನಿಗೆ ಕಿರುಕುಳ ನೀಡುತ್ತಿದ್ದ.

Ad Widget

ಆಕೆ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ. ಆರ್.ಟಿ. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *