ಸಮಗ್ರ ನ್ಯೂಸ್: ಕೇರಳ ಭಾಗದ ಹೆಚ್ಚಿನ ಮಕ್ಕಳಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಎಚ್ಚರ ವಹಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಟೊಮೆಟೋ ಜ್ವರ ಇತ್ತೀಚಿನ ಕಾಯಿಲೆ ಆಗಿರುವ ಕಾರಣ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಮೈಸೂರು ಮತ್ತು ಚಾಮರಾಜನಗರ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಟೊಮೆಟೋ ಜ್ವರದ ಲಕ್ಷಣಗಳಿರುವ ರೋಗಿಗಳು ಬಂದರೆ ತಕ್ಷಣವೇ ಇಲಾಖೆಗೆ ತಿಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಟೊಮೆಟೋ ಜ್ವರದ ಲಕ್ಷಣ: ಕೆಂಪು ಬಣ್ಣದ ದದ್ದುಗಳು, ಚರ್ಮದ ಕಿರಿಕಿರಿ, ಆಯಾಸ, ಮೈ ಕೈ ನೋವು ಮತ್ತು ನಿರ್ಜಲೀಕರಣದ ರೋಗ ಲಕ್ಷಣಗಳನ್ನು ಹೊಂದಿದೆ. ಗುಳ್ಳೆಗಳು ಟೊಮೊಟೋ ಗಾತ್ರದಲ್ಲಿ, ಕೆಂಪುಬಣ್ಣ ಹೊಂದಿರುವುದರಿಂದ ಟೊಮೊಟೋ ಜ್ವರ ಎಂದು ಗುರುತಿಸಲಾಗಿದೆ. ಐದು ವರ್ಷದೊಳಗಿನ ಮಕ್ಕಳಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಜ್ವರ ಕಾಣಿಸಿಕೊಂಡಾಗ ಮಕ್ಕಳನ್ನು ವಿಶ್ರಾಂತಿಯಲ್ಲಿರಿಸಬೇಕು.