ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕಿಡಿಕಾರಿದ ನಟಿ ರಮ್ಯಾ

ಸಮಗ್ರ ನ್ಯೂಸ್: ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಂಸದೆ, ನಟಿ ರಮ್ಯಾ‌ ಮತ್ತೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಕಚೇರಿಯೇ ನನ್ನ ಟ್ರೋಲ್ ಮಾಡಲು ಹೇಳಿದೆ. ಕರ್ನಾಟಕ ಕಾಂಗ್ರೆಸ್ ಅಂದರೆ ಡಿ.ಕೆ.ಶಿವಕುಮಾರ್, ಡಿ.ಕೆ.ಶಿವಕುಮಾರ್ ಅಂದರೆ ಕರ್ನಾಟಕ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದ್ದಾರೆ.

Ad Widget ... ..

ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಉಸ್ತುವಾರಿ ಜವಾಬ್ದಾರಿ ಬಿಟ್ಟ ಬಳಿಕ ನನ್ನ ವಿರುದ್ಧ 8 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. ನನ್ನ ಇಮೇಜ್ ಡ್ಯಾಮೇಜ್ ಮಾಡಲೆಂದೇ ನನ್ನ ವಿರುದ್ಧ ಸುದ್ದಿ ಮಾಡಲಾಗುತ್ತಿದೆ. ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟನೆ ನೀಡಲಿ ಎಂದು ಹೇಳಿದ್ದಾರೆ.

Ad Widget

ನನಗೆ ಬೆನ್ನೆಲುಬಾಗಿ ನಿಂತಿದ್ದು ರಾಹುಲ್ ಗಾಂಧಿ. ನನಗೆ ಅವಕಾಶ ನೀಡಲಾಗಿದೆ ಎಂದು ಯಾರಾದರೂ ಹೇಳಿದರೆ ಅವರು ಅವಕಾಶವಾದಿಗಳು. ಜೀವನದುದ್ದಕ್ಕೂ ಟ್ರೋಲ್, ನಿಂದನೆಗಳಿಗೆ ಒಳಗಾಗಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *