Ad Widget .

ಮರ್ಯಾದಾ ಹತ್ಯೆ; ಅನ್ಯ ಜಾತಿಯ ಯುವತಿಯ ಮದುವೆಯಾಗಿದ್ದಕ್ಕೆ ಯುವಕನ ಕೊಲೆ

ಸಮಗ್ರ ನ್ಯೂಸ್: ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ. ಐದು ಮಂದಿಯ ಗ್ಯಾಂಗ್​ ಯುವನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ. ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

Ad Widget . Ad Widget . Ad Widget .

ಮೃತ ಯುವಕನನ್ನು ನೀರಜ್​ ಪನ್ವಾರ್ (21)​ ಎಂದು ಗುರುತಿಸಲಾಗಿದೆ. ಈತ ಬೇರೊಂದು ಜಾತಿಯ ಯುವತಿಯನ್ನು ಮದುವೆ ಆಗಿದ್ದ. ಇಬ್ಬರ ಮದುವೆ ಯುವತಿ ಮನೆಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯೂ ಮದುವೆಯಾಗಿದ್ದರು. ದಂಪತಿಗೆ ಎರಡೂವರೆ ತಿಂಗಳ ಹಸಿಗೂಸಿದೆ. ನೀರಜ್​ ಪನ್ವಾರ್​ ಬೇಗುಂ ಬಜಾರ್​ನಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದನು.

ಯುವತಿಯ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ನೀರಜ್​ಗೆ ತಲೆ, ಎದೆ ಹಾಗೂ ಇನ್ನಿತರ ಭಾಗಗಳಿಗೆ ಇರಿದು ಕೊಂದಿದ್ದಾರೆ. ನೀರಜ್​ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.

ನೀರಜ್​ ಸಾವಿನ ಬಗ್ಗೆ ಆತನ ತಂದೆ ಮಾತನಾಡಿದ್ದು, ಪ್ರೇಮ ವಿವಾಹವಾಗಿದ್ದಕ್ಕೆ ನನ್ನ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಿಂದಿನಿಂದ ಆತನಿಗೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಆರೋಪಿಸಿದ್ದಾರೆ.

Leave a Comment

Your email address will not be published. Required fields are marked *