ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿಯ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್, ಜ್ಯೋತಿ ಎಂದು ಗುರುತಿಸಲಾಗಿದೆ.ಮುಂಜಾನೆ 3:00 ಗಂಟೆ ಸುಮಾರಿಗೆ ಹೆಗ್ಗುಂಜ್ಜೆಯಲ್ಲಿ ಸುಡುತ್ತಿದ್ದ ಕಾರು ಪತ್ತೆಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಕರಕಲಾಗಿದೆ. ಸ್ಥಳೀರು ಕಾರಿಗೆ ಹತ್ತಿದ್ದ ಬೆಂಕಿಯನ್ನು ನಂದಿಸಿದಾಗ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದ್ದು, ಸ್ವಿಫ್ಟ್ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮೃತರು ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿರೋ ಬಗ್ಗೆ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ನಿನ್ನೆ ಮಂಗಳೂರಿಗೆ ಬಂದಿದ್ದ ಜೋಡಿ ಹುಸೇನ್ ಎಂಬವರಿಂದ ಕಾರು ಬಾಡಿಗೆ ಪಡೆದುಕೊಂಡು ತೆರಳಿದ್ದರಂತೆ. ಸದ್ಯ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.