ಸಮಗ್ರ ನ್ಯೂಸ್: ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ 18 ಮಕ್ಕಳು ಮತ್ತು ಒಬ್ಬರು ಶಿಕ್ಷಕರು ಸಾವನ್ನಪ್ಪಿದ ಘಟನೆ ಅಮೇರಿಕಾದ ಟೆಕ್ಸಾಸ್‌ನ ಉವಾಲ್ಡೆಯಲ್ಲಿ ನಡೆದಿದೆ.
ಟೆಕ್ಸಾಸ್ ಗೌವರ್ನರ್ ಜಾರ್ಜ್ ಅಬಾಟ್ ಘಟನೆ ಕುರಿತು ಮಾಹಿತಿ ನೀಡಿದ್ದು, “ಗುಂಡಿನ ದಾಳಿ ನಡೆಸಿದ 18 ವರ್ಷದ ವಿದ್ಯಾರ್ಥಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ” ಎಂದು ಹೇಳಿದ್ದಾರೆ.
“ಗುಂಡಿನ ದಾಳಿನ ನಡೆಸಿದ ವಿದ್ಯಾರ್ಥಿ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯ ಹತ್ತಿರದಲ್ಲಿರುವ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ” ಎಂದು ಪೊಲೀಸ್ ಮಾಹಿತಿ ನೀಡಿದರು.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಗೌವರ್ನರ್‌ಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದರು. ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.
ಶಾಲೆಯಲ್ಲಿ ಮೃತಪಟ್ಟ ಮಕ್ಕಳಿಗೆ ಸಂತಾಪ ಸೂಚಿಸಲು ಶ್ವೇತ ಭವನ ಸೇರಿದಂತೆ ಇತರ ಸಾರ್ವಜನಿಕ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಶನಿವಾರದ ತನಕ ಅರ್ಧಕ್ಕೆ ಹಾರಿಸಲು ಜೋ ಬೈಡನ್ ಸೂಚನೆ ನೀಡಿದ್ದಾರೆ.
ಗುಂಡಿನ ದಾಳಿಯಲ್ಲಿ 18 ವಿದ್ಯಾರ್ಥಿಗಳು, ಒಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡಿನ ದಾಳಿ ನಡೆಸುವುಕ್ಕೂ ಮೊದಲು ವಿದ್ಯಾರ್ಥಿ ಅಜ್ಜಿಯ ಜೊತೆ ಜಗಳವಾಡಿದ್ದ ಎಂಬ ಮಾಹಿತಿ ಸಿಕ್ಕಿದೆ.