ಸಮಗ್ರ ನ್ಯೂಸ್: ರಾಷ್ಟ್ರಕವಿ ಕುವೆಂಪುರವರಿಗೆ ಅಪಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಹಾಗೂ ಲಕ್ಷ್ಮಣ್ ಆಕಾಶೆ ವಿರುದ್ಧ ವಕೀಲರ ನಿಯೋಗ ದೂರು ದಾಖಲಿಸಿದೆ.
ಈ ಸಂಬಂಧ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್, ಹಿರಿಯ ವಕೀಲರಾದ ಬಾಲನ್, ಕೆ.ಎನ್ ಜಗದೀಶ್ ಕುಮಾರ್, ಪ್ರದೀಪ್, ಸೂರ್ಯ ಮುಕುಂದರಾಜ್ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ ಅವರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರನ್ನು ಅವಹೇಳನ ಮಾಡಿರುವ ಇವರು ನಾಡಗೀತೆಗೂ ಅವಮಾನ ಮಾಡಿದ್ದಾರೆ. ಆದ್ದರಿಂದ ರೋಹಿತ್ ಚಕ್ರತೀರ್ಥ ಮತ್ತು ಲಕ್ಷ್ಮಣ ಆಕಾಶೆ ಕಾರ್ಕಳ ವಿರುದ್ಧ ತಕ್ಷಣವೇ ಕಾನೂನು ರೀತಿ ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕುವೆಂಪುರವರ ಬಗ್ಗೆ ಲಕ್ಷ್ಮಣ ಆಕಾಶೆ ವಿಡಂಬನಾತ್ಮಕವಾಗಿ ಬರೆದಿದ್ದು, ರೋಹಿತ್ ಚಕ್ರತೀರ್ಥ ಇದನ್ನು ಬೆಂಬಲಿಸಿ ಬರೆದಿದ್ದರು. ಈ ಪೋಸ್ಟ್ ಈಗ ವೈರಲ್ ಆಗುತ್ತಿದೆ.