ಸಂಸದೆ ನವನೀತ್ ರಾಣಾಗೆ ಕೊಲೆ ಬೆದರಿಕೆ| ಮಹಾರಾಷ್ಟ್ರಕ್ಕೆ ಕಾಲಿಟ್ಟರೆ ನಿಮ್ಮ ಕಥೆ ಮುಗೀತು!

ಸಮಗ್ರ ನ್ಯೂಸ್: ಹನುಮಾನ್ ಚಾಲೀಸಾ ಪ್ರಕರಣದಲ್ಲಿ ಜೈಲಿಗೆ ಹೋಗಿ ಈಗ ಜಾಮೀನಿನ ಮೇಲೆ ಹೊರಗಡೆ ಇರುವ ಸಂಸದೆ, ನಟಿ ನವನೀತ್ ರಾಣಾ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರಲ್ಲಿ ದೂರು ದಾಖಲು ಮಾಡಿದ್ದಾರೆ.

Ad Widget ... ..

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಪಠಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ದೇಶದ್ರೋಹದ ಆರೋಪದ ಮೇಲೆ ಶಿಕ್ಷೆಗೆ ಒಳಗಾಗಿರುವ ಸಂಸದೆಗೆ ಇದೀಗ ಬೆದರಿಕೆ ಕರೆಗಳು ಬಂದಿವೆ.

Ad Widget

ತನ್ನ ವೈಯಕ್ತಿಕ ಮೊಬೈಲ್ ನಂಬರ್​ಗೆ 11 ಜೀವ ಬೆದರಿಕೆ ಕರೆಗಳು ಬಂದಿವೆ. ಕರೆ ಮಾಡಿರುವ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ನಿಂದಿಸಿದ್ದು, ಒಂದು ವೇಳೆ ಆಕೆ ಮಹಾರಾಷ್ಟ್ರಕ್ಕೆ ಬಂದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಹೇಳಲಾಗಿದೆ. ದೂರು ಸ್ವೀಕರಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Leave a Comment

Your email address will not be published. Required fields are marked *