ಸಮಗ್ರ ನ್ಯೂಸ್: ಅನ್ಯಧರ್ಮೀಯ ಯುವಕನೋರ್ವ ಹಿಂದೂ ಯುವತಿಯನ್ನು ವಿವಾಹವಾದ ವಿಚಾರಕ್ಕೆ ಸಂಬಂಧಿಸಿದಂತೆ ಆತನ ಸಹೋದರನಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ.
ಘಟನೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ ನಡೆದಿದೆ ಎನ್ನಲಾಗಿದ್ದು ಫೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದ್ದು, ಸದ್ಯ ಕೊಕ್ಕಡ ಬೂದಿ ಮುಚ್ಚಿದ ಕೆಂಡದಂತಿದೆ.
ಕೊಕ್ಕಡದ ಮಲ್ಲಿಗೆ ಮಜಲಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯನ್ನು ಮದುವೆಯಾಗಿದ್ದು, ಹಿಂದೂ ಸಂಘಟನೆಗಳ ಮುಖಂಡರು ಲವ್ ಜಿಹಾದ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಆತನ ಸಹೋದರನಿಗೆ ಪರ ಊರಿನ ವ್ಯಕ್ತಿಗಳು ಬಂದು ಹಲ್ಲೆ ನಡೆಸಿರುವುದಾಗಿ ಹೇಳಲಾಗಿದೆ.
ಘಟನೆ ಕುರಿತಂತೆ ಕೊಕ್ಕಡ ರಿಕ್ಷಾ ನಿಲ್ದಾಣದಲ್ಲಿ ಇತ್ತಂಡಗಳ ಕೆಲವರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ಪರಿಸ್ಥಿತಿ ತಹಬದಿಗೆ ಬಂದಿದೆ. ಎರಡೂ ಕಡೆಯವರನ್ನು ಪೊಲೀಸರು ಸಮಾಧಾನಿಸಿ ಕಳುಹಿಸಿದ್ದಾರೆ.
ಇದನ್ನೂ ಓದಿ…