Ad Widget .

ಇ-ಕೆವೈಸಿ ನೋಂದಣಿ ದಿನಾಂಕ‌ ಅವಧಿ ವಿಸ್ತರಣೆ| ನಿಮ್ಮ ಆಧಾರ್ ಅಪ್ಡೇಟ್ ಮಾಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕಾಗಿದ್ದು, ಇದರ ನೋಂದಣಿಯನ್ನು ಜು.31ರವರೆಗೆ ವಿಸ್ತರಿಸಲಾಗಿದೆ.

Ad Widget . Ad Widget .

ನೋಂದಣಿ‌ ಹೀಗೆ ಮಾಡಿ.
ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು httpis//pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು.

Ad Widget . Ad Widget .

ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬೇಕು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್ ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ.

ಆದ್ದರಿಂದ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಜು.31 ರೊಳಗೆ ಇ-ಕೆವೈಸಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *