ಸಮಗ್ರ ನ್ಯೂಸ್: ಕಾರ್ಯಕ್ರಮ ಪ್ರದರ್ಶನ ನೀಡುತ್ತಿದ್ದಾಗಲೇ ಅಸ್ವಸ್ಥಗೊಂಡು ಕುಸಿದು ಬಿದ್ದು ಖ್ಯಾತ ಗಾಯಕ ಕೆ.ಕೆ.ಸಾವನ್ನಪ್ಪಿದ್ದಾರೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ಸಂಭವಿಸಿದ್ದು ಅದಾಗಲೇ ನಗರದ ಸಿಎಂಆರ್ ಐ ಆಸ್ಪತ್ರೆಗೆ ಕರೆತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಸ್ಪತ್ರೆಗೆ ತಲುಪುವ ವೇಳೆಗಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅಭಿಮಾನಿಗಳಲ್ಲಿ ಕೆಕೆ ಎಂದು ಹೆಚ್ಚು ಪರಿಚಿತರಾಗಿದ್ದ ಕೃಷ್ಣಕುಮಾರ್ ಕುನ್ನಾಥ್ ಅವರು ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಮೂರು ದಶಕಗಳ ಕಾಲ ತಮ್ಮ ಸಂಗೀತ ವೃತ್ತಿಜೀವನದಲ್ಲಿ, ಕೆಕೆ ಭಾರತೀಯ ಸಂಗೀತ ಪ್ರೇಮಿಗಳಿಗೆ ಯಾರೂನ್ ದೋಸ್ತಿಯಂತಹ ಅನೇಕ ಹಿಟ್ ಗಳನ್ನು ನೀಡಿದರು.