ಸಮಗ್ರ ನ್ಯೂಸ್: ವಿಚಿತ್ರ ಘಟನೆಯೊಂದರಲ್ಲಿ ಮಾನಸಿಕ ಅಸ್ವಸ್ಥೆ ತಾಯಿ ಅನಾರೋಗ್ಯದಿಂದ ಮೃತಪಟ್ಟ ಮಗಳ ಶವದ ಜೊತೆಗೆ ನಾಲ್ಕು ದಿನ ಕಳೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ಹಾಲಹಳ್ಳಿ ಬಡಾವಣೆಯ ನ್ಯೂ ತಮಿಳು ಕಾಲನಿಯ ನಿವಾಸಿಯಾದ ಗೃಹ ರಕ್ಷಕ ದಳದ ಸಿಬ್ಬಂದಿ ರೂಪಾ (32) ಅನಾರೋಗ್ಯದಿಂದ ಕಳೆದ ದಿನಗಳ ಹಿಂದೆ ಮೃತಪಟ್ಟಿದ್ದರು.
10 ವರ್ಷಗಳ ಹಿಂದೆ ವಿವಾಹವಾಗಿರುವ ಈಕೆಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ಐದು ವರ್ಷದಿಂದ ಗಂಡ, ಮಕ್ಕಳಿಂದ ದೂರವಾಗಿ ತಾಯಿಯೊಂದಿಗೆ ವಾಸವಿದ್ದರು. ತಾಯಿ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ.
ಕಳೆದ ನಾಲ್ಕು ದಿನಗಳಿಂದ ರೂಪಾ ಕಾಣಿಸಿದಿರುವುದು ಸ್ಥಳೀಯರು ಗಮನಿಸಿದ್ದರು. ಈ ನಡುವೆ ಮನೆಯ ಒಳಗಿನಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಕಂಡು ಮನೆಗೆ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ರೂಪಾ ಶವ ಪತ್ತೆಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.