ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಪುತ್ತೂರು ಸಮೀಪದ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ.
ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ ಡಿಲೀಟ್ ಮಾಡಿಸಿದ್ದಾರೆ.
ಕರಾವಳಿಯಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೇಳುತ್ತಿದ್ದು, ಹೈಕೋರ್ಟ್ ಆದೇಶಕ್ಕೆ ಬೆಲೆ ಇಲ್ಲದಂತಾಗಿದೆ. ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಪುಂಡಾಟ ಮೆರೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.