ಸಮಗ್ರ ನ್ಯೂಸ್: ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಕಮಲಾಪುರ ಹೊರವಲಯದ ಹೆದ್ದಾರಿಯಲ್ಲಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ.
ಖಾಸಗಿ ಬಸ್ ಗೋವಾ ದಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.