ವಿಧಾನ ಪರಿಷತ್ ಚುನಾವಣೆ ಹಿನ್ನಲೆ| ಜೂ.13ರಂದು ಶಾಲಾ-ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ದಿನಾಂಕ 13-06-2022ರಂದು ನಡೆಯಲಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ.

Ad Widget ... ..

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಜೂ.13ರಂದು ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

Ad Widget

ಮತದಾನ ನಡೆಯಲಿರುವ ವಾಯುವ್ಯ ಪದವೀಧರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ದಕ್ಷಿಣ ಪದವೀಧರ ಕ್ಷೇತ್ರದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು, ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ. ಹಾಗಾಗಿ ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ

Leave a Comment

Your email address will not be published. Required fields are marked *