Ad Widget .

ಮಂಗಳೂರು: ವಿವಿ ಕಾಲೇಜಿನಲ್ಲಿ ಗುಂಪು ಘರ್ಷಣೆ ಪ್ರಕರಣ| 6 ವಿದ್ಯಾರ್ಥಿಗಳ ಮೇಲೆ ದೂರು ದಾಖಲಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಬಗೆಹರಿಯುವ ಮೊದಲೇ ಇನ್ನೊಂದು ವಿವಾದ ಶುರುವಾಗಿದೆ. ನಿನ್ನೆ ಸಾವರ್ಕರ್‌ ಫೋಟೋ ವಿವಾದ ಸಂಬಂಧಿಸಿದ ಜಗಳವಾಡಿಕೊಂಡ ಮಂಗಳೂರು ವಿಶ್ವವಿದ್ಯಾಲಯ 6 ವಿದ್ಯಾರ್ಥಿಗಳ ಮೇಲೆ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮರ್ಕಝ್‌, ಅಬೂಬುಕ್ಕರ್‌ ಸಿದ್ದಿಕ್‌, ಮಹಮ್ಮದ್‌ ಅಫಾಜ್‌,ಪ್ರಜನ್‌, ಸ್ವಸ್ತಿಕ್ ಮತ್ತು ಗುರುಕಿರಣ್‌ ಎಂದು ಗುರುತಿಸಲಾಗಿದೆ.

Ad Widget . Ad Widget . Ad Widget .

ಕಾಲೇಜಿನ ಕೆಲವು ವಿದ್ಯಾರ್ಥಿಗಳು ತರಗತಿಯಲ್ಲಿ ಸಾವರ್ಕರ್‌ ಫೋಟೊ ಹಾಕಿದ್ದು, ಬಳಿಕ ತೆರವುಗೊಳಿಸಲಾಗಿದೆ. ಕಾಲೇಜಿನ ಕಾಮರ್ಸ್‌ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ಸಂಜೆ ವಿದ್ಯಾರ್ಥಿಗಳಿಬ್ಬರು ಭಾರತಮಾತೆ ಮತ್ತು ಸಾವರ್ಕರ್‌ ಫೋಟೊವನ್ನು ಮುಚ್ಚಿದ ಕವರ್‌ನೊಳಗೆ ತಂದು ಅದನ್ನು ತರಗತಿಯ ಕರಿಹಲಗೆಯ ಮೇಲೆ ಹಾಕಿದ್ದರು. ಇದನ್ನು ಇತರ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು. ಮಂಗಳವಾರ ಬೆಳಗ್ಗೆ ಪ್ರಾಂಶುಪಾಲರು ಆಗಮಿಸಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ, ಅನಧಿಕೃತವಾಗಿ ಹಾಕಿದ್ದ ಫೋಟೊಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಫೋಟೋ ಹಾಕಿದ ವಿದ್ಯಾರ್ಥಿಗಳನ್ನು ಕರೆಸಿ ಎಚ್ಚರಿಕೆ ನೀಡಿ ತಪ್ಪೊಪ್ಪಿಗೆಯನ್ನು ಪಡೆದಿದ್ದಾರೆ.

ಸಾವರ್ಕರ್‌ ಫೋಟೊ ಹಾಕಿದ ಇಡೀ ಘಟನೆಯನ್ನು ವಿದ್ಯಾರ್ಥಿಗಳೇ ವಿಡಿಯೊ ಚಿತ್ರೀಕರಣ ಮಾಡಿ ಅದನ್ನು ಎಡಿಟ್‌ ಕೂಡ ಮಾಡಿ ಜಾಲತಾಣದಲ್ಲಿ ಪಸರಿಸಿದ್ದರು. ಮಾತ್ರವಲ್ಲದೆ, ಕಾಲೇಜಿನ ಅನೇಕ ವಿದ್ಯಾರ್ಥಿಗಳು ಈ ವಿಡಿಯೊವನ್ನು ಶೇರ್‌ ಮಾಡಿಕೊಂಡಿದ್ದರು, ವಾಟ್ಸಪ್‌ ಸ್ಟೇಟಸ್‌ನಲ್ಲೂ ಹಾಕಿಕೊಂಡಿದ್ದರು. ಹೀಗಾಗಿ ಈ ಘಟನೆ ಹೊರಗೆ ಬಂದಿದ್ದು, ಬಳಿಕ ವೈರಲ್‌ ಆಗಿತ್ತು. ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್‌ ಹೋರಾಟಕ್ಕೆ ಪ್ರತಿಯಾಗಿ ಇನ್ನೊಂದು ಗುಂಪಿನ ವಿದ್ಯಾರ್ಥಿಗಳು ಸಾವರ್ಕರ್‌ ಫೋಟೊ ಹಾಕಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *